Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು

ಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು

ಉಳ್ಳಾಲ, ಜೂನ್ 8: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನೀತಿಗಳು ಕಾರ್ಪೊರೇಟ್ ಕಂಪನಿಗಳ ಹಿತಾಸಕ್ತಿಗಳನ್ನು ಕಾಪಾಡುವತ್ತವೇ ಕೇಂದ್ರೀಕೃತವಾಗಿದ್ದು, ದೇಶದ ದುಡಿಯುವ ಕಾರ್ಮಿಕ ವರ್ಗದ ಬದುಕನ್ನು ಸಂಕಷ್ಟದತ್ತ ತಳ್ಳಿವೆ ಎಂದು ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಸುಕುಮಾರ್ ತೊಕ್ಕೋಟು ಆರೋಪಿಸಿದರು.

ಕುತ್ತಾರ್‌ನ ಮುನ್ನೂರು ಯುವಕ ಮಂಡಲದಲ್ಲಿ ಎರಡು ದಿನಗಳ ಕಾಲ ನಡೆದ ಸಿಪಿಐ(ಎಂ) ಉಳ್ಳಾಲ ವಲಯ ಮಟ್ಟದ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಸಮಾಜದ ಸಂಪತ್ತನ್ನು ಸೃಷ್ಟಿಸುವ ಕಾರ್ಮಿಕ ವರ್ಗ ಇಂದು ಆರ್ಥಿಕ ಹಾಗೂ ಸಾಮಾಜಿಕ ಸಂಕಷ್ಟಗಳನ್ನು ಎದುರಿಸುತ್ತಿದ್ದು, ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳೇ ಇದಕ್ಕೆ ಕಾರಣವಾಗಿವೆ ಎಂದು ಹೇಳಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಹಸಿರು ವಿದ್ಯುತ್ ಇಂಧನ ಮತ್ತು ಭೌಗೋಳಿಕ ರಾಜಕೀಯದ ಅಡ್ಡಿ

ಕಾರ್ಯಕ್ರಮದಲ್ಲಿ ಮಾತನಾಡಿದ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯವು ಶ್ರೀಮಂತ ವರ್ಗದ ಪರವಾಗಿ ಸಾಗುತ್ತಿದ್ದು, ಅಭಿವೃದ್ಧಿ ಮತ್ತು ಸೌಹಾರ್ದತೆಯ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಪರಸ್ಪರ ಹೊಂದಾಣಿಕೆಯಲ್ಲಿ ನಿರತರಾಗಿವೆ ಎಂದು ಟೀಕಿಸಿದರು.

ಸಾಮಾನ್ಯ ಜನರ ಶಿಕ್ಷಣ, ಉದ್ಯೋಗ, ಆರೋಗ್ಯ ಹಾಗೂ ಜೀವನೋಪಾಯದ ಪ್ರಶ್ನೆಗಳನ್ನು ಎತ್ತಿಹಿಡಿಯುವಲ್ಲಿ ಎರಡೂ ಪಕ್ಷಗಳು ವಿಫಲವಾಗಿವೆ. ಕಮ್ಯುನಿಸ್ಟ್ ಪಕ್ಷ ಮಾತ್ರವೇ ಹಿಂದುಳಿದವರು, ಶೋಷಿತರು ಹಾಗೂ ಬಡವರ ಪರವಾಗಿ ಧ್ವನಿಯಾಗುತ್ತಿದೆ ಎಂದು ಅವರು ಹೇಳಿದರು.

ರಾಜ್ಯ ಸರ್ಕಾರದ ಆರೋಗ್ಯ ಕ್ಷೇತ್ರದ ಖಾಸಗೀಕರಣ ನೀತಿ ಹಾಗೂ ಆರೋಗ್ಯ ಸಚಿವರ ಧೋರಣೆಯ ವಿರುದ್ಧ ಮುಂದಿನ ದಿನಗಳಲ್ಲಿ ಸಿಪಿಐ(ಎಂ) ಹೋರಾಟ ರೂಪಿಸಲಿದೆ ಎಂದು ಮುನೀರ್ ಕಾಟಿಪಳ್ಳ ಎಚ್ಚರಿಸಿದರು.

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

ಸಭೆಯ ಅಧ್ಯಕ್ಷತೆಯನ್ನು ಸಿಪಿಐ(ಎಂ) ಹಿರಿಯ ನಾಯಕ ಸುಂದರ ಕುಂಪಲ ವಹಿಸಿದ್ದರು. ವೇದಿಕೆಯಲ್ಲಿ ಹಿರಿಯ ನಾಯಕರಾದ ಕೃಷ್ಣಪ್ಪ ಸಾಲ್ಯಾನ್, ಪದ್ಮಾವತಿ ಶೆಟ್ಟಿ, ಜಿಲ್ಲಾ ಸಮಿತಿ ಸದಸ್ಯರಾದ ಶೇಖರ್ ಕುಂದರ್, ಜಯಂತ ನಾಯಕ್, ರಫೀಕ್ ಹರೇಕಳ ಹಾಗೂ ಉಳ್ಳಾಲ ವಲಯ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಉಪಸ್ಥಿತರಿದ್ದರು.

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading