ಮೂಡಬಿದಿರೆ: ಹೊಸಬೆಟ್ಟು ಗ್ರಾಮದ ಬಿರಾವು ಕೆಂಪ್ಲಾಜೆಯ ಧೀರಜ್ ಡಿ. ಅವರು ಆಟೋಮೊಬೈಲ್ ಎಂಜಿನಿಯರಿಂಗ್ನಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಮಂಗಳೂರಿನ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಅಂತಿಮ ವರ್ಷದ ವ್ಯಾಸಂಗ ಪೂರ್ಣಗೊಳಿಸಿರುವ ಧೀರಜ್, ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU)ದಲ್ಲಿ ಪ್ರಥಮ ರ್ಯಾಂಕ್ ಪಡೆದು ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.
ಆಟೋಮೊಬೈಲ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ತಮ್ಮ ಶೈಕ್ಷಣಿಕ ಸಾಧನೆಯ ಮೂಲಕ ಧೀರಜ್ ಅವರು ಕುಟುಂಬ, ಶಿಕ್ಷಣ ಸಂಸ್ಥೆ ಹಾಗೂ ಮೂಡಬಿದಿರೆ ಭಾಗಕ್ಕೆ ಹೆಮ್ಮೆ ತಂದಿದ್ದಾರೆ.
ಧೀರಜ್ ಅವರ ಈ ಸಾಧನೆಗೆ ಅದಿದ್ರಾವಿಡ ಸಮಾಜ ಸೇವಾ ಸಂಘ (ರಿ), ಬಂಟ್ವಾಳ ತಾಲೂಕು ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಮುಂದೆಯೂ ಮತ್ತಷ್ಟು ಸಾಧನೆಗಳನ್ನು ಮಾಡುವಂತಾಗಲಿ ಹಾಗೂ ಅವರ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭ ಹಾರೈಸಿದ್ದಾರೆ.
ಧೀರಜ್ ಅವರ VTU ಚಿನ್ನದ ಪದಕದ ಸಾಧನೆ ವಿದ್ಯಾರ್ಥಿಗಳಿಗೆ ಹಾಗೂ ಯುವಜನತೆಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಪ್ರೇರಣೆಯಾಗಲಿ ಎಂಬ ಆಶಯ ವ್ಯಕ್ತವಾಗಿದೆ.