Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆಎಳೆಯ ಮನಸುಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿದಾಗ ಮಾತ್ರ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ: ಸಿ. ಅರ್ಪಿತಾಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಸಂಚಲನ: ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಆಘಾತ?ಸರ್ಕಾರಿ ನೌಕರರಿಗೆ ಸೌಲಭ್ಯಗಳು ಹೆಚ್ಚುತ್ತಿವೆ; ಆದರೆ ಸರ್ಕಾರಿ ಸಂಸ್ಥೆಗಳ ಭವಿಷ್ಯ ಏನು?ರೈತರಿಗೆ, ಜಾಗೃತಿಯೇ ಅಂತಿಮ ಗುರಾಣಿಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು • 🔥
Advertisement

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ

ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಎಚ್ಚರಿಕೆ

ಮಂಗಳೂರು, ಮೇ 14: ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ರಾಜ್ಯ ಆರೋಗ್ಯ ಇಲಾಖೆಯ ಕ್ರಮವನ್ನು ತೀವ್ರವಾಗಿ ಖಂಡಿಸಿ, Communist Party of India (Marxist) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಾಗೂ ಮೆರವಣಿಗೆ ನಡೆಯಿತು.

ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಮಿನಿ ವಿಧಾನಸೌಧದವರೆಗೆ ಸಾಗಿದ್ದು, ನೂರಾರು ಕಾರ್ಯಕರ್ತರು ಭಾಗವಹಿಸಿದರು. ಮೆರವಣಿಗೆಯ ವೇಳೆ ಆರೋಗ್ಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ Dinesh Gundu Rao ವಿರುದ್ಧ ಘೋಷಣೆಗಳು ಮೊಳಗಿದವು.

ಇದನ್ನೂ ಓದಿ: ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, “ದಕ್ಷಿಣ ಕನ್ನಡ ಜಿಲ್ಲೆ ಈಗಾಗಲೇ ಖಾಸಗಿ ಮೆಡಿಕಲ್ ಕಾಲೇಜುಗಳು ಹಾಗೂ ಕಾರ್ಪೊರೇಟ್ ಆಸ್ಪತ್ರೆಗಳ ಪ್ರಭಾವಕ್ಕೆ ಸಿಲುಕಿದೆ. ಖಾಸಗಿ ಆಸ್ಪತ್ರೆಗಳ ದುಬಾರಿ ಚಿಕಿತ್ಸೆಯಿಂದ ಸಾಮಾನ್ಯ ಜನರು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಚಿಕಿತ್ಸೆಗೆ ದೇಣಿಗೆ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ,” ಎಂದು ಆರೋಪಿಸಿದರು.

ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಸಂಸ್ಥೆಗಳಿಗೆ ಹಸ್ತಾಂತರಿಸುವುದು ಬಡಜನರ ಆರೋಗ್ಯ ಹಕ್ಕಿನ ಮೇಲಿನ ನೇರ ದಾಳಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. “ಇದು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಹಂತ ಹಂತವಾಗಿ ಖಾಸಗೀಕರಣಗೊಳಿಸುವ ಕ್ರಮವಾಗಿದ್ದು, ಬಡ ರೋಗಿಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳ ತರಬೇತಿ ಸಾಧನಗಳಾಗಿ ಬಳಸುವ ಅಪಾಯವಿದೆ,” ಎಂದರು.

ಸರಕಾರ ಈ ಆದೇಶವನ್ನು ಹಿಂಪಡೆಯದಿದ್ದಲ್ಲಿ ಜಿಲ್ಲೆಯಾದ್ಯಂತ ಹೋರಾಟವನ್ನು ತೀವ್ರಗೊಳಿಸಲಾಗುವುದು. ಅಗತ್ಯವಿದ್ದರೆ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, “ಆರೋಗ್ಯ ಕ್ಷೇತ್ರದ ಖಾಸಗೀಕರಣವನ್ನು ಯಾವುದೇ ಕಾರಣಕ್ಕೂ ಒಪ್ಪಲಾಗುವುದಿಲ್ಲ. ಈ ವಿಚಾರದಲ್ಲಿ ಬಿಜೆಪಿ ಮೌನ ವಹಿಸಿರುವುದು ಅನುಮಾನಗಳಿಗೆ ಕಾರಣವಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಖಾಸಗಿ ಆಸ್ಪತ್ರೆಗಳ ಪರವಾಗಿ ಕೆಲಸ ಮಾಡುತ್ತಿವೆ ಎಂಬ ಸಂದೇಶ ಜನರಲ್ಲಿ ಮೂಡುತ್ತಿದೆ,” ಎಂದು ಟೀಕಿಸಿದರು.

ಪ್ರತಿಭಟನಾ ಸಭೆಯ ಅಧ್ಯಕ್ಷತೆಯನ್ನು ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ. ಯಾದವ ಶೆಟ್ಟಿ ವಹಿಸಿದ್ದರು. ಸಭೆಯಲ್ಲಿ ಡಾ. ಕೃಷ್ಣಪ್ಪ ಕೊಂಚಾಡಿ, ಬಿ.ಎಂ. ಭಟ್, ವಸಂತ ಆಚಾರಿ, ಜಯಂತಿ ಶೆಟ್ಟಿ ಹಾಗೂ ಸುಕುಮಾರ್ ತೊಕ್ಕೊಟ್ಟು ಉಪಸ್ಥಿತರಿದ್ದರು. ಜಿಲ್ಲಾ ಸಮಿತಿ ಸದಸ್ಯ ಮನೋಜ್ ವಾಮಂಜೂರು ಕಾರ್ಯಕ್ರಮ ನಿರೂಪಿಸಿದರು.

Web Add
Prajapara News Kannada