Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆಎಳೆಯ ಮನಸುಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿದಾಗ ಮಾತ್ರ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ: ಸಿ. ಅರ್ಪಿತಾಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಸಂಚಲನ: ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಆಘಾತ?ಸರ್ಕಾರಿ ನೌಕರರಿಗೆ ಸೌಲಭ್ಯಗಳು ಹೆಚ್ಚುತ್ತಿವೆ; ಆದರೆ ಸರ್ಕಾರಿ ಸಂಸ್ಥೆಗಳ ಭವಿಷ್ಯ ಏನು?ರೈತರಿಗೆ, ಜಾಗೃತಿಯೇ ಅಂತಿಮ ಗುರಾಣಿಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು • 🔥
Advertisement

ಕರಾವಳಿ ಅಭಿವೃದ್ಧಿಗೆ ಮಹತ್ವ ನೀಡಿದ ರಾಜ್ಯ ಬಜೆಟ್ – ಬಿ. ರಮಾನಾಥ ರೈ

ಕರಾವಳಿ ಅಭಿವೃದ್ಧಿಗೆ ಮಹತ್ವ ನೀಡಿದ ರಾಜ್ಯ ಬಜೆಟ್ – ಬಿ. ರಮಾನಾಥ ರೈ

ಮಂಗಳೂರು: ಕರ್ನಾಟಕ ಸರ್ಕಾರ ಮಂಡಿಸಿರುವ ಇತ್ತೀಚಿನ ರಾಜ್ಯ ಬಜೆಟ್ ಜನಪರ ಹಾಗೂ ಅಭಿವೃದ್ಧಿ ಪರವಾಗಿದ್ದು, ಸಮಾಜದ ವಿವಿಧ ವರ್ಗಗಳ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಬಿ. ರಮಾನಾಥ ರೈ ತಿಳಿಸಿದ್ದಾರೆ.

ರಾಜ್ಯದ ರೈತರು, ಮಹಿಳೆಯರು, ಯುವಕರು ಹಾಗೂ ಮಧ್ಯಮ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿದ ಯೋಜನೆಗಳು ಸ್ವಾಗತಾರ್ಹವಾಗಿವೆ ಎಂದು ಅವರು ಹೇಳಿದ್ದಾರೆ. ಕೃಷಿ, ಶಿಕ್ಷಣ, ವಸತಿ, ಆರೋಗ್ಯ, ಅರಣ್ಯ, ಮುಜರಾಯಿ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸರ್ಕಾರ ವಿಶೇಷ ಆದ್ಯತೆ ನೀಡಿರುವುದು ಸಂತಸದ ವಿಷಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಅದೇ ರೀತಿ ಕರಾವಳಿ ಕರ್ನಾಟಕದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಪ್ರವಾಸೋದ್ಯಮ, ಮೀನುಗಾರಿಕೆ ಹಾಗೂ ಪೊಲೀಸ್ ಠಾಣೆಗಳ ಬಲವರ್ಧನೆ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಬಜೆಟ್‌ನಲ್ಲಿ ಒತ್ತು ನೀಡಲಾಗಿದೆ. ಇದರಿಂದ ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ

ರಾಜ್ಯದ ಸಮಗ್ರ ಅಭಿವೃದ್ಧಿಯ ಜೊತೆಗೆ ಕರಾವಳಿ ಭಾಗದ ಪ್ರಗತಿಗೂ ಈ ಬಜೆಟ್ ಮಹತ್ವದ ಪಾತ್ರ ವಹಿಸಲಿದೆ ಎಂದು ಬಿ. ರಮಾನಾಥ ರೈ ವಿಶ್ವಾಸ ವ್ಯಕ್ತಪಡಿಸಿದರು.

😀
0
😍
0
😢
0
😡
0
👍
1
👎
0

Web Add
Prajapara News Kannada