Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆಎಳೆಯ ಮನಸುಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿದಾಗ ಮಾತ್ರ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ: ಸಿ. ಅರ್ಪಿತಾಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಸಂಚಲನ: ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಆಘಾತ?ಸರ್ಕಾರಿ ನೌಕರರಿಗೆ ಸೌಲಭ್ಯಗಳು ಹೆಚ್ಚುತ್ತಿವೆ; ಆದರೆ ಸರ್ಕಾರಿ ಸಂಸ್ಥೆಗಳ ಭವಿಷ್ಯ ಏನು?ರೈತರಿಗೆ, ಜಾಗೃತಿಯೇ ಅಂತಿಮ ಗುರಾಣಿಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು • 🔥
Advertisement

ವಿಜಯಪುರದಲ್ಲಿ ‘ಸಂವಿಧಾನ ಹಬ್ಬ–2026’: ಏಪ್ರಿಲ್ 11ರಿಂದ ನಾಲ್ಕು ದಿನಗಳ ಕಾರ್ಯಕ್ರಮ

ವಿಜಯಪುರದಲ್ಲಿ ‘ಸಂವಿಧಾನ ಹಬ್ಬ–2026’: ಏಪ್ರಿಲ್ 11ರಿಂದ ನಾಲ್ಕು ದಿನಗಳ ಕಾರ್ಯಕ್ರಮ

ವಿಜಯಪುರ: ಸಂವಿಧಾನದ ಮೌಲ್ಯಗಳು, ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಸಂದೇಶವನ್ನು ಸಮಾಜದ ಎಲ್ಲ ವರ್ಗಗಳಿಗೂ ತಲುಪಿಸುವ ಉದ್ದೇಶದಿಂದ ವಿಜಯಪುರದಲ್ಲಿ “ಸಂವಿಧಾನ ಹಬ್ಬ–2026” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬಸವಣ್ಣ, ಜ್ಯೋತಿಬಾ–ಸಾವಿತ್ರಿಬಾಯಿ ಫುಲೆ, ಫಾತಿಮಾ ಶೇಖ್ ಹಾಗೂ ಬಾಬಾ ಸಾಹೇಬ ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳನ್ನು ಜನರಿಗೆ ಪರಿಚಯಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಕಾರ್ಯಕ್ರಮದ ಅಂಗವಾಗಿ ವಿಚಾರ ಸಂಕಿರಣ, ಸಂವಾದ, ಚರ್ಚೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ವಿವಿಧ ಕ್ಷೇತ್ರಗಳ ಬೌದ್ಧಿಕರು, ಸಾಮಾಜಿಕ ಕಾರ್ಯಕರ್ತರು ಹಾಗೂ ಯುವಕರು ಭಾಗವಹಿಸಲಿದ್ದಾರೆ. ಸಂವಿಧಾನದ ಮಹತ್ವ ಮತ್ತು ಅದರ ಮೌಲ್ಯಗಳನ್ನು ಸಮಾಜದಲ್ಲಿ ಬಲಪಡಿಸುವ ಕುರಿತು ವಿವಿಧ ಉಪನ್ಯಾಸಗಳು ನಡೆಯಲಿವೆ.

ಇದನ್ನೂ ಓದಿ: ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ

ಏಪ್ರಿಲ್ 11 ರಿಂದ 14ರವರೆಗೆ ವಿಜಯಪುರ ನಗರದ ಕಂದಗಲ್‌ನ ಶ್ರೀ ಹನುಮಂತಾಯ ರಂಗಮಂದಿರದಲ್ಲಿ ಈ ನಾಲ್ಕು ದಿನಗಳ ಸಂವಿಧಾನ ಹಬ್ಬ ನಡೆಯಲಿದೆ. ಈ ಅವಧಿಯಲ್ಲಿ ವಿದ್ಯಾರ್ಥಿಗಳು, ಯುವಕರು ಮತ್ತು ಸಾರ್ವಜನಿಕರಿಗಾಗಿ ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಸಂವಿಧಾನದ ಆಶಯಗಳನ್ನು ಜನರಿಗೆ ತಿಳಿಸಲು ಮತ್ತು ಸಮಾನತೆ, ನ್ಯಾಯ ಹಾಗೂ ಮಾನವೀಯ ಮೌಲ್ಯಗಳ ಅರಿವು ಮೂಡಿಸಲು ಈ ಹಬ್ಬವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ಸಂಪರ್ಕ: 9740420826, 7795219574, 9019261915.

😀
0
😍
0
😢
0
😡
0
👍
0
👎
0

Web Add
Prajapara News Kannada