ಬೆಂಗಳೂರಿನ ಪೀಣ್ಯದಲ್ಲಿರುವ ಭಾರತಿ ಥಿಯೇಟರ್ನಲ್ಲಿ ಬುಧವಾರ ಸಿನಿಮಾ ಪ್ರದರ್ಶನ ನಡೆಯುತ್ತಿದ್ದ ವೇಳೆ ಸೀಲಿಂಗ್ನ ಒಂದು ಭಾಗ ಏಕಾಏಕಿ ಕುಸಿದಿದೆ. ಮಳೆಯಾಗುತ್ತಿದ್ದ ಸಂದರ್ಭದಲ್ಲಿ ಚಿತ್ರಮಂದಿರದ ಒಳಭಾಗದಲ್ಲೇ ಸೀಲಿಂಗ್ನ ಭಾಗ ಬಿದ್ದಿದ್ದು, ಘಟನೆಯಿಂದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.
ಘಟನೆ ಬಳಿಕ ಚಿತ್ರಮಂದಿರದ ಸಿಬ್ಬಂದಿ ಸಿನಿಮಾ ಪ್ರದರ್ಶನವನ್ನು ಅರ್ಧದಲ್ಲೇ ಸ್ಥಗಿತಗೊಳಿಸಿದ್ದಾರೆ. ಘಟನೆಯ ನಿಖರ ಕಾರಣ ಹಾಗೂ ಹಾನಿಯ ಪ್ರಮಾಣದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.