Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಬಂಟ್ವಾಳ: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಧ್ವಜಾರೋಹಣ ನೆರವೇರಿಸಿ, ಎಲ್ಲರಿಗೂ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ ಹಾಗೂ ಆದರ್ಶಗಳನ್ನು ಸ್ಮರಿಸಿ, ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು. ದೇಶದ ಏಕತೆ, ಸೌಹಾರ್ದತೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮತ್ತಷ್ಟು ಬಲಪಡಿಸಲು ಎಲ್ಲರೂ ಒಗ್ಗಟ್ಟಿನಿಂದ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

ಕಾರ್ಯಕ್ರಮದಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್‌ನ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading