ಎಐಸಿಸಿ ಕಾರ್ಯದರ್ಶಿ, ಕೆಪಿಸಿಸಿ ಉಪಾಧ್ಯಕ್ಷ ಹಾಗೂ ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿದ್ದ ಸೂರಜ್ ಹೆಗ್ಡೆ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
.ಹೃದಯ ಸಂಬಂಧಿತ ತೊಂದರೆಯಿಂದ ಅವರನ್ನು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ಸೂರಜ್ ಹೆಗ್ಡೆ ಅವರು ಕಾಂಗ್ರೆಸ್ ಪಕ್ಷದಲ್ಲಿ ಹಲವು ದಶಕಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದರು. ಯುವ ಕಾಂಗ್ರೆಸ್ ಹಂತದಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ಅವರು ನಂತರ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (AICC) ಕಾರ್ಯದರ್ಶಿಯಾಗಿ ವಿವಿಧ ರಾಜ್ಯಗಳ ಸಂಘಟನೆ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಕರ್ನಾಟಕ ಕಾಂಗ್ರೆಸ್‌ನಲ್ಲಿಯೂ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದರು.
ಸೂರಜ್ ಹೆಗ್ಡೆ ಅವರು ಸಂಘಟನಾ ಚಾತುರ್ಯ, ಪಕ್ಷನಿಷ್ಠೆ ಮತ್ತು ಕಾರ್ಯಕರ್ತರೊಂದಿಗೆ ಹೊಂದಿದ್ದ ಆತ್ಮೀಯ ಸಂಬಂಧಕ್ಕಾಗಿ ಗುರುತಿಸಿಕೊಂಡಿದ್ದರು.