Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ • 🔥
Advertisement

ಬಿವಿಎಸ್ ಕರ್ನಾಟಕದ ರಾಜ್ಯಮಟ್ಟದ ವಿಚಾರ ಸಂಕಿರಣ: ಒಳಮೀಸಲಾತಿ ಚರ್ಚೆ,ಅಲೆಮಾರಿ ಸಮುದಾಯಕ್ಕೆ 1% ಮೀಸಲಾತಿಗೆ ಒತ್ತಾಯ

ಬಿವಿಎಸ್ ಕರ್ನಾಟಕದ ರಾಜ್ಯಮಟ್ಟದ ವಿಚಾರ ಸಂಕಿರಣ: ಒಳಮೀಸಲಾತಿ ಚರ್ಚೆ,ಅಲೆಮಾರಿ ಸಮುದಾಯಕ್ಕೆ 1% ಮೀಸಲಾತಿಗೆ ಒತ್ತಾಯ

ಬೆಂಗಳೂರು: ಭಾರತೀಯ ವಿದ್ಯಾರ್ಥಿ ಸಂಘ (BVS) ಕರ್ನಾಟಕದ ವತಿಯಿಂದ ರಾಜ್ಯಮಟ್ಟದ ವಿಚಾರ ಸಂಕಿರಣವು ಇಂದು ಬೆಂಗಳೂರಿನಲ್ಲಿ  ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಡೆಯಿತು.

ವಿಚಾರ ಸಂಕಿರಣದ ಮುಖ್ಯ ವಿಷಯವಾಗಿ “ಒಳ ಮೀಸಲಾತಿಯ ಒಳಸುಳಿ ಹಾಗೂ ಮೀಸಲಾತಿಯ ಮುನ್ನೋಟ” ಕುರಿತು ವಿಸ್ತೃತ ಮತ್ತು ಗಂಭೀರ ಚರ್ಚೆಗಳು ನಡೆಯುವ ಮೂಲಕ ಸಾಮಾಜಿಕ ನ್ಯಾಯದ ವಿವಿಧ ಆಯಾಮಗಳನ್ನು ಅನಾವರಣಗೊಳಿಸಲಾಯಿತು.

ಪ್ರೊ. ಶ್ರೀನಿವಾಸ್ ಜಿ ಪ್ರಾಸ್ತಾವಿಕವಾಗಿ ಮಾತಾಡಿ, ಒಳಮೀಸಲಾತಿ ಸಾಮಾಜಿಕ ನ್ಯಾಯದ ಅನಿವಾರ್ಯ ಹಂತ ಎಂದು ಅಭಿಪ್ರಾಯಪಟ್ಟರು. ಅಲೆಮಾರಿ ಸಮುದಾಯಗಳಿಗೆ ಜನಸಂಖ್ಯೆಯ ಆಧಾರದ ಮೇಲೆ ಕನಿಷ್ಠ ಒಂದು ಶೇಕಡಾ ಮೀಸಲಾತಿ ನೀಡಬೇಕು ಎಂಬ ಸ್ಪಷ್ಟ ಬೇಡಿಕೆಯನ್ನು ಮುಂದಿಟ್ಟ ಅವರು, ನೂರು ಬಿಂದುಗಳ ರೋಸ್ಟರ್ ವ್ಯವಸ್ಥೆಯಲ್ಲಿ ಪ್ರವರ್ಗ ಎ, ಬಿ ಮತ್ತು ಸಿಗಳಿಗೆ ಕ್ರಮಬದ್ಧವಾಗಿ ಅವಕಾಶ ಕಲ್ಪಿಸುವಂತೆ ರೋಸ್ಟರ್‌ನಲ್ಲಿ ಸ್ಪಷ್ಟ ಹೆಸರೀಕರಣ ಮಾಡಬೇಕೆಂದು ಒತ್ತಾಯಿಸಿದರು. ರೋಸ್ಟರ್ ವ್ಯವಸ್ಥೆ ಪಾರದರ್ಶಕವಾಗಿರದೆ ಹೋದರೆ ಮೀಸಲಾತಿಯ ಉದ್ದೇಶವೇ ವಿಫಲವಾಗುತ್ತದೆ ಎಂದು ಅವರು ಎಚ್ಚರಿಸಿದರು.

ಪ್ರಮುಖ ವಿಚಾರವಾಗಿ, ಕೆನೆಪದರ (Creamy Layer) ವ್ಯವಸ್ಥೆಯನ್ನು ಎಸ್‌ಸಿ–ಎಸ್‌ಟಿ ಸಮುದಾಯಗಳಿಗೆ ಅನ್ವಯಿಸಬಾರದು ಎಂದು ಅವರು ಸ್ಪಷ್ಟಪಡಿಸಿದರು. ಜೊತೆಗೆ ಪ್ರಿಫರೆನ್ಶಿಯಲ್ ಸಿಸ್ಟಮ್ ಹಾಗೂ ಕ್ಯಾರಿ ಫಾರ್ವರ್ಡ್ ಸಿಸ್ಟಮ್ ಅನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಸಲಹೆ ನೀಡಿದರು. ಪರಿಶಿಷ್ಟ ಜಾತಿ–ಪಂಗಡಗಳ ಒಳಗೆಯೇ ನಾಲ್ಕು ಉಪಗುಂಪುಗಳಾಗಿ ವರ್ಗೀಕರಿಸಿ ಒಳಮೀಸಲಾತಿ ನೀಡಬೇಕು ಎಂಬ ಅಭಿಪ್ರಾಯವನ್ನೂ ಮಂಡಿಸಿದರು ಜೊತೆಗೆ, ಆದಿ ಆಂದ್ರ, ಆದಿ ದ್ರಾವಿಡ ಮತ್ತು ಆದಿ ಕರ್ನಾಟಕ ಎಂಬ ಪದಗಳು ಜಾತಿ ಸೂಚಕಗಳಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಇವುಗಳು ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಸೇರಿರುವ ಕಾರಣದಿಂದ ಕೆಲವರು ಈ ಹೆಸರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ ಅವರು, ಸರ್ಕಾರವು ಈ ಮೂರು ಪದಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ತಕ್ಷಣವೇ ತೆಗೆಯಬೇಕು ಎಂದು ಆಗ್ರಹಿಸಿದರು. ಇದರಿಂದ ಸಂಬಂಧಪಟ್ಟವರು ತಮ್ಮ ಮೂಲ ಜಾತಿಯನ್ನು ನಮೂದಿಸಿ ಜಾತಿ ಪ್ರಮಾಣ ಪತ್ರ ಪಡೆದುಕೊಳ್ಳಲು ಮುಂದಾಗಲಿದ್ದು, ಮೀಸಲಾತಿಯ ದುರುಪಯೋಗವನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ

ಭೀಮಾಶಂಕರ್ ಅವರು ಮಾತನಾಡಿ, ಎ.ಜೆ. ಸದಾಶಿವ ಆಯೋಗವು ಜಾತಿ ಆಧಾರಿತವಾಗಿ ಒಳಮೀಸಲಾತಿಯನ್ನು ವಿಶ್ಲೇಷಿಸಿದ್ದು, ನಾಗಮೋಹನ್ ದಾಸ್ ಸಮಿತಿಯು ವರ್ಗ ಮತ್ತು ವರ್ಗೀಕರಣ ಆಧಾರದಲ್ಲಿ ಅಧ್ಯಯನ ನಡೆಸಿದೆ ಎಂದು ವಿವರಿಸಿದರು. ಜೊತೆಗೆ ಎಸ್‌ಸಿಪಿ – ಟಿಎಸ್ಪಿ ಅನುದಾನ ಸರಿಯಾಗಿ ಬಳಕೆಯಾಗುತ್ತಿಲ್ಲ ಎಂಬುದರ ಬಗ್ಗೆ ಆತಂಕ ವ್ಯಕ್ತಪಡಿಸಿ, ಅದರ ಸಮರ್ಪಕ ಬಳಕೆಗೆ ವ್ಯವಸ್ಥೆ ರೂಪಿಸಬೇಕೆಂದು ಹೇಳಿದರು.

ರುದ್ರಯ್ಯ ಅವರು ಮಾತನಾಡಿ,“ಸ್ವಾತಂತ್ರ್ಯ ಬಂದ ತಕ್ಷಣದಿಂದಲೇ ಎಲ್ಲರಿಗೂ ಮೀಸಲಾತಿ ಸಿಕ್ಕಿತು ಎನ್ನುವುದು ತಪ್ಪು. ಸ್ವಾತಂತ್ರ್ಯದ ಸುಮಾರು ಐವತ್ತು ವರ್ಷಗಳ ನಂತರ ಮಾತ್ರ ಎಸ್‌ಸಿ–ಎಸ್‌ಟಿ–ಒಬಿಸಿ ಸಮುದಾಯಗಳಿಗೆ ಮೀಸಲಾತಿ ಪ್ರಾಯೋಗಿಕವಾಗಿ ಲಭಿಸಲು ಆರಂಭವಾಯಿತು. ಈಗ ಒಂದೇ ತಲೆಮಾರಿನಲ್ಲಿ ಹೆಚ್ಚು ಜನ ವಿದ್ಯಾವಂತರಾಗಿರುವುದರಿಂದ ಮೀಸಲಾತಿಯ ಪ್ರಯೋಜನ ಕಾಣುತ್ತಿದೆ” ಎಂದು ಹೇಳಿದರು. ಎದುರಾಗಿರುವ ಸಮಸ್ಯೆಗಳನ್ನು ನಾವು ನಮ್ಮೊಳಗೇ ಬಗೆಹರಿಸಿಕೊಂಡು ಮುಂದೆ ಸಾಗಬೇಕು ಎಂದು ಕರೆ ನೀಡಿದರು.

ಹರಿರಾಮ್ ಅವರು ಮಾತನಾಡಿ, “ಒಳಗಿನಿಂದಲೇ ನಮ್ಮೊಳಗೆ ಗೊಂದಲ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ. ಕೆಲವರು ಹೊಲೆಯರು–ಮಾದಿಗರು ನಡುವೆ ಭೇದ ಹುಟ್ಟುಹಾಕಲು ಯತ್ನಿಸುತ್ತಿದ್ದಾರೆ. ಸರ್ಕಾರಗಳು ನಮ್ಮನ್ನು ವಿಭಜಿಸಲು ಪ್ರಯತ್ನ ಮಾಡುತ್ತಿವೆ. ಇದನ್ನು ಅರ್ಥ ಮಾಡಿಕೊಂಡು ಎಲ್ಲರೂ ಒಟ್ಟಾಗಿ ನಿಲ್ಲಬೇಕು, ನಮಗೆ ಬೇಕಾದ ಹಕ್ಕುಗಳನ್ನು ಒಗ್ಗಟ್ಟಿನಿಂದ ಪಡೆಯಬೇಕು” ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮನೋರಂಜಿನಿ ಅವರು, “ಸಮೀಕ್ಷೆ ಎಂದರೆ ಸದಾ ನಮ್ಮ ಮೇಲೆಯೇ ಯಾಕೆ? ನಮಗೆ ಏನು ಇಲ್ಲ ಎಂದು ಹೇಳಲಾಗುತ್ತದೆ. ಹಾಗಾದರೆ ಮೇಲ್ವರ್ಗದವರ ಬಳಿ ಎಷ್ಟು ಭೂಮಿ, ಎಷ್ಟು ಉದ್ಯೋಗ, ಎಷ್ಟು ಅಧಿಕಾರ ಸ್ಥಾನಗಳಿವೆ ಎಂಬುದರ ಮೇಲೂ ಸಮೀಕ್ಷೆ ನಡೆಯಲಿ. ಆಗ ಯಾರು ಏನು ಪಡೆದಿದ್ದಾರೆ ಎಂಬ ಸತ್ಯ ಹೊರಬರುತ್ತದೆ” ಎಂದು ಹೇಳಿದರು.

ಇದನ್ನೂ ಓದಿ: ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ

ಅಲೆಮಾರಿ ಸಮುದಾಯದ ಪ್ರತಿನಿಧಿ ಲೋಹಿತ್ ಅವರು ಮಾತನಾಡಿ, “ಅಲೆಮಾರಿ ಸಮುದಾಯಕ್ಕೆ ಕನಿಷ್ಠ ಒಂದು ಶೇಕಡಾ ಮೀಸಲಾತಿ ನೀಡುವಂತೆ ಸರ್ಕಾರದ ಮೇಲೆ ಒತ್ತಾಯ ಹಾಕಬೇಕು. ಈ ವಿಚಾರದಲ್ಲಿ ಎಲ್ಲರೂ ನಮ್ಮೊಂದಿಗೆ ನಿಲ್ಲಬೇಕು” ಎಂದು ಮನವಿ ಮಾಡಿದರು.

ಒಳ ಮೀಸಲಾತಿ ವಿಚಾರದಿಂದ ಮಾದಿಗ–ಹೊಲೆಯ ಸಮುದಾಯಗಳ ನಡುವೆ ಬಿರುಕು ಮೂಡಿಸುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಆತಂಕ ವ್ಯಕ್ತವಾಯಿತು. ಈ ಹಿನ್ನೆಲೆ, ಎಲ್ಲ ಸಮುದಾಯಗಳನ್ನು ಒಂದಾಗಿಸಿ ಸಾಮಾಜಿಕ ಏಕತೆಯನ್ನು ಕಾಪಾಡುವುದು ಭಾರತೀಯ ವಿದ್ಯಾರ್ಥಿ ಸಂಘದ ಪ್ರಮುಖ ಜವಾಬ್ದಾರಿ ಎಂದು ಅಭಿಪ್ರಾಯಪಟ್ಟರು.

😀
0
😍
0
😢
0
😡
0
👍
2
👎
0

Web Add
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
Prajapara News Kannada